1ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.
2ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
3ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.
4ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.
5ಯೆಹೋವ ದೇವರು ಮತ್ತೊಮ್ಮೆ ನನಗೆ,
6“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ,
7ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ
8ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು
9ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ!
10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು,
11ನಾನು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ಯೆಹೋವ ದೇವರು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ನನಗೆ,
12“ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ,
13ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ;
14ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು.
15ಅವರಲ್ಲಿ ಅನೇಕರು ಎಡವಿಬೀಳುವರು,
16ಸಾಕ್ಷಿಯನ್ನು ಕಟ್ಟಿಡು,
17ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ
18ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
19ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?
20ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.
21ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
22ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.