1ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:
2ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ,
3“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ;
4ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ.
5ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ;
6ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ;
7“ನನ್ನ ಶತ್ರು ದುಷ್ಟನ ಹಾಗಿರಲಿ;
8ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ,
9ಭಕ್ತಿಹೀನನಿಗೆ ಯಾತನೆ ಬಂದರೆ,
10ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ?
11“ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು;
12ನೀವೆಲ್ಲರೂ ಇದನ್ನು ನೋಡಿದ್ದರೂ,
13“ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ;
14ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು;
15ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು;
16ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ,
17ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು;
18ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ,
19ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು;
20ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು;
21ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು;
22ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು,
23ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು;