We Believe JesusFé, Esperança e Nova Vida

ಯೋಬ 32

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 31 ಯೋಬ ಯೋಬ 33 →

1ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು.

2ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.

3ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.

4ಎಲೀಹು, ಯೋಬನ ಮಾತುಗಳು ಮುಗಿಯುವವರೆಗೂ ಕಾದಿದ್ದನು. ಏಕೆಂದರೆ ಅವನಿಗಿಂತ ಅವರೆಲ್ಲರೂ ಹಿರಿಯರಾಗಿದ್ದರು.

5ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು.

6ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ:

7‘ದಿನ ಗತಿಸಿದವರು ಮಾತನಾಡಲಿ,

8ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು;

9ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ;

10“ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ,

11ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ.

12ನಾನು ನಿಮ್ಮ ಮಾತಿಗೆ ಪೂರ್ಣ ಲಕ್ಷ್ಯವಿಟ್ಟಿದ್ದೆನು.

13‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ,

14ಯೋಬನು ನನಗೆ ವಿರೋಧವಾಗಿ ನುಡಿಗಳನ್ನು ಪ್ರಯೋಗ ಮಾಡಲಿಲ್ಲ;

15“ಯೋಬನೇ, ಇವರು ವಿಸ್ಮಯಗೊಂಡು ಇನ್ನು ಉತ್ತರ ಕೊಡದವರಾಗಿದ್ದಾರೆ;

16ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ,

17ನಾನು ನನ್ನ ಪಾಲಿನ ಉತ್ತರವನ್ನು ಹೇಳುವೆನು,

18ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ;

19ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ;

20ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು;

21ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು;

22ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ,

← ಯೋಬ 31 ಯೋಬ ಯೋಬ 33 →

ಯೋಬ 32 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019