1ಎಲೀಹು ಮುಂದುವರಿದು ಹೇಳಿದ್ದೇನೆಂದರೆ:
2“ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ.
3ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ.
4ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ;
5“ನೋಡು, ದೇವರು ಸರ್ವಶಕ್ತರು,
6ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ;
7ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ;
8ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ,
9ದೇವರು ಅವರ ಕೃತ್ಯವನ್ನೂ
10ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು,
11ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ,
12ಅವರು ವಿಧೇಯರಾಗದಿದ್ದರೆ,
13“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು;
14ಅವರು ತಮ್ಮ ಯೌವನದಲ್ಲಿ,
15ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು;
16“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು;
17ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ.
18ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು;
19ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ
20ಜನರನ್ನು ಅವರ ಮನೆಗಳಿಂದ ಎಳೆದುಕೊಂಡು
21ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ!
22“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ.
23ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ್ಯಾರು?
24ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ,
25ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ;
26ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು.
27“ದೇವರು ನೀರಿನ ಹನಿಗಳನ್ನು ಕೂಡಿಸಿದಾಗ,
28ಮೋಡಗಳು ಮಳೆಗರೆಯುತ್ತವೆ.
29ಮೋಡಗಳ ವಿಸ್ತೀರ್ಣತೆಯನ್ನೂ,
30ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ.
31ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ36:31 ಆಳುತ್ತಾರೆ ಅಥವಾ ಪೋಷಿಸುತ್ತಾರೆ
32ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು,
33ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ;