1ಅದಕ್ಕೆ ಯೋಬನು ಉತ್ತರವಾಗಿ ಹೀಗೆಂದನು:
2“ಅಯ್ಯೋ, ನನ್ನ ವ್ಯಥೆಯನ್ನು ತೂಕಮಾಡಿ ನೋಡಿದರೆ ಒಳ್ಳೇದು,
3ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ;
4ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ;
5ಹುಲ್ಲು ಇರುವಾಗ ಕಾಡುಕತ್ತೆಯು ಅರಚುವುದೋ?
6ರುಚಿ ಇಲ್ಲದ ಆಹಾರನ್ನು ಉಪ್ಪಿಲ್ಲದೆ ತಿನ್ನಬಹುದೋ?
7ಮುಟ್ಟಲು ಕೂಡ ನನಗೆ ಇಷ್ಟವಾಗಲಿಲ್ಲ,
8“ದೇವರು ನನ್ನ ವಿಜ್ಞಾಪನೆಯನ್ನು ಲಾಲಿಸಿದರೆ ಸಾಕು,
9ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ,
10ಹಾಗಿದ್ದರೆ, ಇದು ನನಗೆ ಆದರಣೆಯಾಗಿರುವುದು;
11“ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ?
12ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ?
13ನನಗೆ ಸಹಾಯವು ಇಲ್ಲದೆ ಹೋಗಿದೆಯಲ್ಲಾ?
14“ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ,
15ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ,
16ಅವು ಮಂಜುಗಡ್ಡೆಯಿಂದ ಕಪ್ಪಾಗಿವೆ,
17ಉಷ್ಣ ಸಮಯದಲ್ಲಿ ಅವು ಹರಿಯುವದಿಲ್ಲ;
18ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು,
19ತೇಮದ ವರ್ತಕರ ಗುಂಪುಗಳು ನೀರಿಗಾಗಿ ಹಂಬಲಿಸುತ್ತಾರೆ;
20ಅವರು ನಿರೀಕ್ಷಿಸಿದ್ದರಿಂದ ವ್ಯಥೆಗೊಂಡರು;
21ಈಗ ನೀವು ಸಹ ಹಾಗೆಯೇ ನಿಸ್ಸಹಾಯಕರಾಗಿ ಇದ್ದೀರಿ;
22ನಾನು ನಿಮ್ಮನ್ನು, ‘ನನಗೆ ದಾನಮಾಡಿರಿ,’ ಎಂದು ಬಿನ್ನವಿಸಿದೆನೋ?
23‘ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ,’ ಎಂದೂ,
24“ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು;
25ಯಥಾರ್ಥ ಮಾತುಗಳು ಎಷ್ಟೋ ನೋವನ್ನು ತರುತ್ತವೆ!
26ನಾನು ಹೇಳಿದ ಮಾತುಗಳನ್ನು ತಿದ್ದಬೇಕೆನ್ನುವಿರೋ?
27ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ,
28“ಆದ್ದರಿಂದ ಈಗ ಸ್ವಲ್ಪ ದಯೆಯುಳ್ಳವರಾಗಿ ನನ್ನನ್ನು ದೃಷ್ಟಿಸಿರಿ;
29ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ;
30ನನ್ನ ನಾಲಿಗೆಯಲ್ಲಿ ದುಷ್ಟತನ ಇದೆಯೋ?