We Believe JesusFé, Esperança e Nova Vida

ಯೆರೆಮೀಯ 13

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 12 ಯೆರೆಮೀಯ ಯೆರೆಮೀಯ 14 →

1ಯೆಹೋವ ದೇವರು ನನಗೆ, “ನೀನು ಹೋಗಿ, ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.

2ನಾನು ಯೆಹೋವ ದೇವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ.

3ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು,

4ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿಯ ಬಂಡೆಯ ಸಂದಿಯೊಳಗೆ ಬಚ್ಚಿಡು,” ಎಂಬುದಾಗಿ ಯೆಹೋವ ದೇವರ ಎರಡನೆಯ ಆದೇಶ ನನಗೆ ಬಂದಿತು.

5ಆಗ ಯೆಹೋವ ದೇವರ ಅಪ್ಪಣೆಯ ಮೇರೆಗೆ ನಾನು ಹೋಗಿ, ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.

6ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.

7ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಹುಡುಕಿ, ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

8ಆಗ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನೆಂದರೆ,

9“ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ, ಯೆರೂಸಲೇಮಿನ ಮಹಾ ಗರ್ವವನ್ನು ಕೆಡಿಸುವೆನು.

10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.

11ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’

12“ಆದ್ದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು: ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವು. ಆಗ ಅವರು ನಿನಗೆ ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ,’ ಎಂದು ನಿನಗೆ ಹೇಳುವರು.

13ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.

14ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”

15ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ;

16ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು

17ನೀವು ಕೇಳದಿದ್ದರೆ,

18ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ,

19ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ,

20ಚೀಯೋನೇ, ಕಣ್ಣೆತ್ತು,

21ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು

22ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?”

23ಕೂಷ್ಯನು13:23 ಅಥವಾ ಇಥಿಯೋಪಿಯದವನು ತನ್ನ ಚರ್ಮವನ್ನೂ,

24“ಅಡವಿಯ ಗಾಳಿಯಿಂದ ಹಾರಿಹೋಗುವ

25ಇದೇ ನಿನ್ನ ಭಾಗವು,

26ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ,

27ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು,

← ಯೆರೆಮೀಯ 12 ಯೆರೆಮೀಯ ಯೆರೆಮೀಯ 14 →

ಯೆರೆಮೀಯ 13 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019