1ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:
2“ಯೆಹೂದವು ದುಃಖಪಡುತ್ತದೆ.
3ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ.
4ದೇಶದಲ್ಲಿ ಮಳೆ ಇಲ್ಲದ ಕಾರಣ
5ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ,
6ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು,
7ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ,
8ಓ ಇಸ್ರಾಯೇಲಿನ ನಿರೀಕ್ಷೆಯೇ,
9ಏಕೆ ಸ್ತಬ್ಧನಂತೆಯೂ,
10ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ:
11ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.
12ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.
13ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.
14ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
15ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
16ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.
17“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು.
18ನಾನು ಹೊಲಕ್ಕೆ ಹೋದರೆ ಇಗೋ,
19ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ?
20ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ,
21ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ,
22ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ?