1ಯೆರೆಮೀಯನು ಈ ಮಾತುಗಳನ್ನು ಪ್ರವಾದಿಸಲಾಗಿ, ಯೆಹೋವ ದೇವರ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗ ಪಷ್ಹೂರನು ಕೇಳಿದನು.
2ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.
3ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು.
4ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.
5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.
6ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ”
7ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು.
8ಏಕೆಂದರೆ, ನಾನು ಮಾತನಾಡುವವನಾದ್ದರಿಂದ
9“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ.
10ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು.
11ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ.
12ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ,
13ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ.
14ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ.
15ನನ್ನ ತಂದೆಗೆ, “ನಿನಗೆ ಗಂಡು ಕೂಸು ಹುಟ್ಟಿದೆ,”
16ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ
17ನಾನು ಗರ್ಭ ಬಿಟ್ಟಾಗಲೇ ಅವರು ನನ್ನನ್ನು ಕೊಲ್ಲದೆ ಹೋದದ್ದರಿಂದ,
18ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ,