We Believe JesusFé, Esperança e Nova Vida

ಯೆರೆಮೀಯ 22

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 21 ಯೆರೆಮೀಯ ಯೆರೆಮೀಯ 23 →

1ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು:

2‘ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಯೆಹೂದದ ಅರಸನೇ, ನೀನೂ, ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಸಹಿತವಾಗಿ ಯೆಹೋವ ದೇವರ ವಾಕ್ಯವನ್ನು ಕೇಳಿರಿ.

3ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.

4ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ, ಆಗ ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವರೂ, ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡುವ ಅರಸರು ತಮ್ಮ ಸೇವಕರ ಮತ್ತು ತಮ್ಮ ಜನರಸಹಿತವಾಗಿ ಈ ಅರಮನೆಯ ಬಾಗಿಲುಗಳಿಂದ ಪ್ರವೇಶಿಸಿದರು.

5ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”

6ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ:

7ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ

8“ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.

9‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.”

10ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ.

11ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ.

12ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.”

13“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ

14ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ,

15“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ?

16ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು.

17“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ

18ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ:

19ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು.

20“ಲೆಬನೋನಿಗೆ ಹೋಗಿ ಕೂಗು,

21ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು.

22ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು.

23ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ,

24“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,

25ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ, ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಹಾಗೂ ಬಾಬಿಲೋನಿಯ ಕೈಗೆ ಒಪ್ಪಿಸಿ ಬಿಡುತ್ತೇನೆ.

26ನಿನ್ನನ್ನೂ, ನಿನ್ನ ಹೆತ್ತ ತಾಯಿಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಹಾಕಿಬಿಡುವೆನು. ನೀವು ಅಲ್ಲೇ ಸಾಯುವಿರಿ.

27ಆದರೆ ಅವರು ತಿರುಗಿ ಬರುವುದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂದಿರುಗಲಾರರು,” ಎಂದು ಯೆಹೋವ ದೇವರು ಹೇಳುತ್ತಾರೆ.

28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ?

29ಓ ದೇಶವೇ, ದೇಶವೇ, ದೇಶವೇ,

30ಯೆಹೋವ ದೇವರು ಹೀಗೆ ಹೇಳುತ್ತಾರೆ:

← ಯೆರೆಮೀಯ 21 ಯೆರೆಮೀಯ ಯೆರೆಮೀಯ 23 →

ಯೆರೆಮೀಯ 22 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019