We Believe JesusFé, Esperança e Nova Vida

ಯೆರೆಮೀಯ 25

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 24 ಯೆರೆಮೀಯ ಯೆರೆಮೀಯ 26 →

1ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.

2ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:

3ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

4ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.

5ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.

6ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.”

7“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.

8ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ

9ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.

10ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.

11ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.

12“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.

13ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.

14ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

15ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.

16ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.”

17ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.

18ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.

19ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ,

20ವಿದೇಶೀಯ ಜನರೆಲ್ಲರಿಗೂ,

21ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,

22ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ,

23ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ,

24ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,

25ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,

26ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು.

27“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’

28ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು.

29ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’

30“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ,

31ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು.

32ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ:

33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.

34ಕುರುಬರೇ, ಗೋಳಿಟ್ಟು ಕೂಗಿರಿ.

35ಆಗ ಕುರುಬರಿಗೆ ಓಡಿ ಹೋಗುವುದಕ್ಕೂ,

36ಕುರುಬರ ಕೂಗಿನ ಶಬ್ದವು,

37ಸಮಾಧಾನವುಳ್ಳ ಗೋಮಾಳಗಳು

38ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ.

← ಯೆರೆಮೀಯ 24 ಯೆರೆಮೀಯ ಯೆರೆಮೀಯ 26 →

ಯೆರೆಮೀಯ 25 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019