1“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ,
2“ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು.
3ಆದ್ದರಿಂದ ಮಳೆಗಳು ನಿಂತುಹೋದವು,
4ಈಗಲೂ ನನಗೆ, ‘ನನ್ನ ತಂದೆಯೇ,
5ಆತನು ನಿತ್ಯ ಕೋಪಮಾಡುವವನೋ?
6ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.
7ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
8ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.
9ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.
10ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.
11ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.
12ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು.
13ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ,
14“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.
15ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
16ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ.
17ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.
18ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”
19ಯೆಹೋವ ದೇವರು ಹೇಳುವುದೇನೆಂದರೆ:
20ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ,
21ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು.
22“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ;
23ನಿಶ್ಚಯವಾಗಿ ಗುಡ್ಡಗಳಿಂದಲೂ,
24ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ
25ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ.