1ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ:
2ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು.
3ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್12:3 ಕಿನ್ನೆರೆತ್ ಹೀಬ್ರೂ ಭಾಷೆಯಲ್ಲಿ ಗಲಿಲಾಯ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು.
4ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು.
5ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.
6ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು.
7ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ,
8ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು.
9ಯೆರಿಕೋವಿನ ಅರಸನು
10ಯೆರೂಸಲೇಮಿನ ಅರಸನು.
11ಯರ್ಮೂತಿನ ಅರಸನು.
12ಎಗ್ಲೋನಿನ ಅರಸನು.
13ದೆಬೀರಿನ ಅರಸನು.
14ಹೊರ್ಮಾದ ಅರಸನು.
15ಲಿಬ್ನದ ಅರಸನು.
16ಮಕ್ಕೇದದ ಅರಸನು.
17ತಪ್ಪೂಹದ ಅರಸನು.
18ಅಫೇಕದ ಅರಸನು.
19ಮಾದೋನಿನ ಅರಸನು.
20ಶಿಮ್ರೋನ್ ಮೆರೋನಿನ ಅರಸನು.
21ತಾನಕದ ಅರಸನು.
22ಕೆದೆಷಿನ ಅರಸನು.
23ನೆಪೊತ್ ದೋರ್ ಪ್ರಾಂತದ ದೋರಿನ ಅರಸನು.
24ತಿರ್ಚದ ಅರಸನು.