We Believe JesusFé, Esperança e Nova Vida

ಯೆಹೋಶುವ 21

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆಹೋಶುವ 20 ಯೆಹೋಶುವ ಯೆಹೋಶುವ 22 →

1ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.

2ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು.

3ಹಾಗೆಯೇ ಇಸ್ರಾಯೇಲರು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಯೆಹೋವ ದೇವರ ಆಜ್ಞೆಯ ಪ್ರಕಾರ ಪಟ್ಟಣಗಳನ್ನೂ ಗೋಮಾಳಗಳನ್ನೂ ಕೊಟ್ಟರು. ಅವುಗಳ ವಿವರ:

4ಕೊಹಾತ್ಯರ ಗೋತ್ರಗಳಿಗೆ ಚೀಟು ಬಂದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೆಹೂದದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ, ಬೆನ್ಯಾಮೀನನ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.

5ಕೊಹಾತ್ಯರಿಗೆ ಎಫ್ರಾಯೀಮನ ಗೋತ್ರದಲ್ಲಿಯೂ, ದಾನನ ಗೋತ್ರದಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹತ್ತು ಪಟ್ಟಣಗಳು ಚೀಟಿಯಿಂದ ದೊರಕಿದವು.

6ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.

7ಇದಲ್ಲದೆ ಮೆರಾರೀಯರಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ, ಗಾದನ ಗೋತ್ರದಲ್ಲಿಯೂ, ಜೆಬುಲೂನನ ಗೋತ್ರದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.

8ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು.

9ಅವರು ಯೆಹೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರದಲ್ಲಿಯೂ ಕೆಲವು ಪಟ್ಟಣಗಳನ್ನು ಕೊಟ್ಟರು.

10ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ:

11ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.

12ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು.

13ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ

14ಯತ್ತೀರನ್ನೂ ಎಷ್ಟೆಮೋವನ್ನೂ

15ಹೋಲೋನನ್ನೂ ದೆಬೀರನ್ನೂ

16ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.

17ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ

18ಅನಾತೋತನ್ನೂ ಅಲ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.

19ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

20ಇದಲ್ಲದೆ ಲೇವಿಯರಾದ ಕೊಹಾತ್ಯನ ಗೋತ್ರದ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯೀಮನ ಗೋತ್ರದಲ್ಲಿ ಚೀಟಿಯಿಂದ ದೊರಕಿದ ಪಟ್ಟಣಗಳ ವಿವರ:

21ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯೀಮನ ಬೆಟ್ಟಗಳಲ್ಲಿರುವ,

22ಕಿಬ್‌ಚೈಮ್ ಮತ್ತು ಬೇತ್ ಹೋರೋನ್ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

23ಇದಲ್ಲದೆ ದಾನ್ಯನ ಗೋತ್ರದಲ್ಲಿ,

24ಅಯ್ಯಾಲೋನನ್ನೂ ಗತ್ ರಿಮ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

25ಮನಸ್ಸೆಯ ಅರ್ಧಗೋತ್ರದಲ್ಲಿ,

26ಹೀಗೆ ಉಳಿದಂಥ ಕೊಹಾತ್ಯನ ಗೋತ್ರಗಳಲ್ಲಿ ಹತ್ತು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

27ಲೇವಿ ಗೋತ್ರದ ಗೇರ್ಷೋನ್ಯರಿಗೆ

28ಇದಲ್ಲದೆ ಇಸ್ಸಾಕಾರನ ಗೋತ್ರದ ಸೊತ್ತಿನಿಂದ

29ಯರ್ಮೂತ್ ಮತ್ತು ಏಂಗನ್ನೀಮನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

30ಆಶೇರನ ಗೋತ್ರದ ಸೊತ್ತಿನಿಂದ

31ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

32ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ

33ಗೇರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಹದಿಮೂರು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

34ಉಳಿದ ಲೇವಿಯರಾದ ಮೆರಾರೀಯ ಕುಟುಂಬಗಳಿಗೆ

35ದಿಮ್ನಾ, ನಹಲಾಲ್, ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

36ಇದಲ್ಲದೆ ರೂಬೇನನ ಗೋತ್ರದಲ್ಲಿ

37ಕೆದೇಮೋತನ್ನೂ ಮೇಫಾತನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

38ಗಾದ್ಯರ ಗೋತ್ರದಲ್ಲಿ,

39ಹೆಷ್ಬೋನನ್ನೂ ಯಜ್ಜೇರನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

40ಹೀಗೆಯೇ ಲೇವಿ ಗೋತ್ರದ ಉಳಿದಂಥ ಮೆರಾರೀಯರ ಕುಟುಂಬಗಳ ಪ್ರಕಾರ ಚೀಟಿಯಿಂದ ದೊರೆತ ಪಟ್ಟಣಗಳು ಹನ್ನೆರಡು.

41ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು.

42ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು.

43ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.

44ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.

45ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು.

← ಯೆಹೋಶುವ 20 ಯೆಹೋಶುವ ಯೆಹೋಶುವ 22 →

ಯೆಹೋಶುವ 21 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019