1ಸಂಸೋನನು ತಿಮ್ನಾತಿಗೆ ಇಳಿದು, ಅಲ್ಲಿ ತಿರುಗಿ ಫಿಲಿಷ್ಟಿಯರ ಪುತ್ರಿಯರ ಒಬ್ಬ ಸ್ತ್ರೀಯನ್ನು ಕಂಡು,
2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು.
3ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು.
4ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.
5ಆಗ ಸಂಸೋನನೂ, ಅವನ ತಂದೆತಾಯಿಗಳೂ ತಿಮ್ನಾತಿಗೆ ಹೋಗುತ್ತಿದ್ದರು. ಅವರು ತಿಮ್ನತಿನ ದ್ರಾಕ್ಷಿತೋಟಗಳ ಬಳಿಗೆ ಬಂದಾಗ, ಪ್ರಾಯದ ಸಿಂಹವು ಗರ್ಜಿಸುತ್ತಾ ಅವನ ಎದುರಿಗೆ ಬಂದಿತು.
6ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
7ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾಗಿದ್ದಳು.
8ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ಮದುವೆ ಮಾಡಿಕೊಳ್ಳುವುದಕ್ಕೆ ತಿರುಗಿ ಬರುವಾಗ, ಸಿಂಹದ ಹೆಣವನ್ನು ನೋಡುವುದಕ್ಕೆ ಪಕ್ಕಕ್ಕೆ ಹೋದಾಗ, ಸಿಂಹದ ಹೆಣದಲ್ಲಿ ಜೇನುಹುಳಗಳನ್ನು ಮತ್ತು ಜೇನನ್ನು ಕಂಡನು.
9ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ, ತನ್ನ ತಂದೆತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಿಂದ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು.
11ಅವರು ಅವನನ್ನು ಕಂಡಾಗ, ಅವನ ಸಂಗಡ ಇರುವುದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.
12ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು.
13ನಿಮ್ಮಿಂದ ಗ್ರಹಿಸಲು ಆಗದೆ ಹೋದರೆ, ನೀವು ನನಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡಬೇಕು,” ಎಂದನು.
14ಆಗ ಅವನು ಅವರಿಗೆ ಹೇಳಿದ್ದೇನೆಂದರೆ,
15ನಾಲ್ಕನೆಯ14:15 ಕೆಲವು ಪ್ರತಿಗಳಲ್ಲಿ ಏಳನೆಯ ದಿವಸ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.
16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು, “ನನ್ನನ್ನು ಹಗೆ ಮಾಡುತ್ತಿರುವೆ. ನೀನು ನನ್ನನ್ನು ನಿಜವಾಗಿ ಪ್ರೀತಿ ಮಾಡುವುದಿಲ್ಲ, ಏಕೆಂದರೆ ನೀನು ನನ್ನ ಜನರಿಗೆ ಒಂದು ಒಗಟನ್ನು ಹೇಳಿ ನನಗೆ ತಿಳಿಸದೆ ಹೋದೆ,” ಎಂದಳು.
17ಅವಳು ಔತಣದ ಏಳು ದಿವಸಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಆದರೆ ಏಳನೆಯ ದಿವಸದಲ್ಲಿ ಅವಳು, ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಒಗಟಿನ ಅರ್ಥವನ್ನು ತಿಳಿಸಿದನು. ಆಗ ಆಕೆ ತನ್ನ ಜನರಿಗೆ ಆ ಒಗಟನ್ನು ತಿಳಿಸಿದಳು.
18ಏಳನೆಯ ದಿವಸದಲ್ಲಿ ಸೂರ್ಯ ಮುಳುಗುವುದಕ್ಕಿಂತ ಮುಂಚೆ ಆ ಊರಿನವರು ಅವನಿಗೆ,
19ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.
20ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟುಹೋದನು. ಆದರೆ ಸಂಸೋನನ ಹೆಂಡತಿಯನ್ನು ಅವನ ಸಂಗಡ ಸ್ನೇಹಿತನಾಗಿದ್ದವನಿಗೆ ಮದುವೆ ಮಾಡಿಕೊಟ್ಟರು.