1ಆಗ ನಾಮಾಥ್ಯನಾದ ಚೋಫರನು ಹೀಗೆಂದನು:
2“ಬಹಳ ಮಾತುಗಳಿಂದ ಉತ್ತರ ಕೊಡಬಾರದೋ?
3ನಿನ್ನ ವ್ಯರ್ಥ ಮಾತಿಗೆ ಮನುಷ್ಯರು ಮೌನವಾಗಿರಬೇಕೋ?
4ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು,
5ಆಹಾ, ದೇವರು ಮಾತನಾಡಿ,
6ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು,
7“ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ?
8ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ?
9ಅದರ ಅಳತೆ ಭೂಮಿಗಿಂತ ಉದ್ದವೂ,
10“ದೇವರು ಬಂದು ನಿನ್ನನ್ನು ಸೆರೆಮನೆಯಲ್ಲಿಟ್ಟರೂ,
11ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ;
12ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ,
13“ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ,
14ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು,
15ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ;
16ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ;
17ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು;
18ನೀನು ನಿರೀಕ್ಷೆ ಇದೆ ಎಂದು ಭರವಸೆಯಿಂದ ಇರುವಿ;
19ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು;
20ಆದರೆ ದುಷ್ಟರ ಕಣ್ಣುಗಳು ಕುಂದುವವು;