1ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:
2“ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ,
3ನಾನು ಮಾತನಾಡುವಾಗ, ನನ್ನನ್ನು ಸಹಿಸಿಕೊಳ್ಳಿರಿ;
4“ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ?
5ನನ್ನ ಕಡೆಗೆ ಗಮನಿಸಿರಿ;
6ನಾನು ಈ ವಿಷಯವನ್ನು ನೆನಪು ಮಾಡಿಕೊಂಡಾಗ ಭಯಪಡುತ್ತೇನೆ;
7ದುಷ್ಟರು ವೃದ್ಧರಾಗುವವರೆಗೆ ಏಕೆ ಬದುಕುತ್ತಾರೆ?
8ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ,
9ಅವರ ಮನೆ ಸುರಕ್ಷಿತವಾಗಿ ನಿರ್ಭಯದಿಂದಿರುವುದು;
10ಅವರ ಹೋರಿಯು ಅಭಿವೃದ್ಧಿಯಾಗಿರುವುದು;
11ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ;
12ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ;
13ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ;
14ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು,
15ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು?
16ಆದರೆ ಅವರ ಸುಖವು ಅವರ ಕೈಯಲ್ಲಿ ಇಲ್ಲ;
17“ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ?
18ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ?
19‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’
20ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ;
21ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ
22“ದೇವರಿಗೆ ಅರಿವನ್ನು ಬೋಧಿಸಬಹುದೇ?
23ಒಬ್ಬ ವ್ಯಕ್ತಿಯು ಸುಖವಾಗಿಯೂ, ಸಮೃದ್ಧನಾಗಿಯೂ,
24ಅವನ ದೇಹ ಚೆನ್ನಾಗಿ ಬೆಳೆದು ಪೋಷಣೆಯಾಗಿರುತ್ತದೆ;
25ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ,
26ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ;
27“ನೋಡಿರಿ, ನಿಮ್ಮ ಆಲೋಚನೆಗಳನ್ನು ನಾನು ಬಲ್ಲೆನು.
28ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ?
29ಮಾರ್ಗದಲ್ಲಿ ಹಾದು ಹೋಗುವವರನ್ನು ನೀವು ವಿಚಾರಿಸಲಿಲ್ಲವೋ?
30ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ;
31ದುಷ್ಟರ ಮಾರ್ಗವನ್ನು ಮುಖಾಮುಖಿಯಾಗಿ ಅವರಿಗೆ ತೋರಿಸುವವರು ಯಾರು?
32ದುಷ್ಟರನ್ನು ಸಮಾಧಿಗೆ ಒಯ್ಯುತ್ತಾರೆ.
33ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ;
34“ವ್ಯರ್ಥವಾದ ನಿಮ್ಮ ಮಾತುಗಳಿಂದ ನೀವು ನನ್ನನ್ನು ಸಂತೈಸುವುದು ಹೇಗೆ?