1“ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ?
2ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ,
3ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ;
4ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ;
5ಕಾಡುಕತ್ತೆಗಳ ಹಾಗೆ ಬಡವರು
6ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು,
7ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ;
8ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ;
9ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ;
10ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ;
11ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ;
12ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ;
13“ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ;
14ಕೊಲೆಗಾರನು ಮುಂಜಾನೆಯೇ ಎದ್ದು,
15ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು.
16ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ.
17ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು;
18“ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ.
19ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ,
20ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು;
21ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ;
22ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ;
23ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು;
24ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ;
25“ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು?