1ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:
2“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ?
3ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ?
4ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು?
5“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ
6ಪಾತಾಳವು ದೇವರ ದೃಷ್ಟಿಗೆ ತೆರೆದಿದೆ;
7ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ;
8ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ;
9ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ.
10ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ,
11ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ;
12ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ;
13ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ;
14ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ;