1“ಇದನ್ನು ನೋಡಿದಾಗ ನನ್ನ ಹೃದಯವು ನಡುಗಿ,
2ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ.
3ತಮ್ಮ ಮಿಂಚನ್ನು ದೇವರು ಆಕಾಶಮಂಡಲದಲ್ಲಿ ಹರಡುತ್ತಾರೆ;
4ಮಿಂಚಿನ ತರುವಾಯ ಘರ್ಜನೆಯ ಶಬ್ದ ಕೇಳಿಬರುವುದು;
5ದೇವರು ತಮ್ಮ ಸ್ವರದಿಂದ ಅದ್ಭುತಕಾರ್ಯಗಳನ್ನು ಗುಡುಗುತ್ತಾರೆ;
6ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ.
7ಹೀಗೆ ದೇವರು ತಮ್ಮ ಕೃತ್ಯವನ್ನು ಜನರೆಲ್ಲರೂ ತಿಳುಕೊಳ್ಳುವಂತೆ ಮಾಡುತ್ತಾರೆ.
8ಆಗ ಮೃಗಗಳು ಅಡಗುವ ಸ್ಥಳಕ್ಕೆ ಹೋಗುತ್ತವೆ,
9ದಕ್ಷಿಣದಿಕ್ಕಿನಿಂದ ಬಿರುಗಾಳಿಯು ಬೀಸುತ್ತದೆ.
10ದೇವರ ಶ್ವಾಸದಿಂದ ನೀರು ಮಂಜುಗಡ್ಡೆ ಆಗುವುದು;
11ಮೋಡವನ್ನು ತೇವಾಂಶದಿಂದ ಭಾರಮಾಡುತ್ತಾರೆ;
12ಭೂಲೋಕದಲ್ಲೆಲ್ಲಾ ಸಿಡಿಲುಗಳಿಗೆ
13ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು,
14“ಆದ್ದರಿಂದ ಯೋಬನೇ, ಇದಕ್ಕೆ ಕಿವಿಗೊಡು;
15ದೇವರು ಮೋಡಗಳಿಗೆ ಅಪ್ಪಣೆ ಕೊಡುವುದನ್ನು ಅರಿತಿರುವೆಯಾ?
16ಮೋಡಗಳ ತೂಗಾಟವನ್ನು ಬಲ್ಲೆಯಾ?
17ಭೂಮಿಯು ದಕ್ಷಿಣ ಗಾಳಿಯಿಂದ ಸ್ತಬ್ಧವಾಗಿರುವಾಗ,
18ಎರಕ ಹೊಯ್ದ ಬಲವಾಗಿರುವ ಕನ್ನಡಿಯ ಹಾಗೆ,
19“ನಾವು ದೇವರಿಗೆ ಏನು ಹೇಳಬೇಕೆಂದು ನಮಗೆ ತಿಳಿಸು;
20ನಾನು ಮಾತನಾಡಬೇಕೆಂದು ದೇವರಿಗೆ ಹೇಳಿಕಳುಹಿಸಬೇಕೆ?
21ಗಾಳಿ ಬೀಸಿ ಆಕಾಶ ಶುಭ್ರವಾದಾಗ,
22ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ;
23ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ;
24ಆದ್ದರಿಂದ ಮನುಷ್ಯರು ದೇವರಿಗೆ ಭಯಪಡುತ್ತಾರೆ;