We Believe JesusFé, Esperança e Nova Vida

ಲೂಕ 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

ಲೂಕ ಲೂಕ 2 →

1ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.

2ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.

3ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.

4ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು.

5ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ1:5 24 ಯಾಜಕ ವರ್ಗದಲ್ಲಿ ಅಬೀಯನ ವರ್ಗವು ಒಂದಾಗಿತ್ತು. ಅಬೀಯನು ಎಂಟನೆಯ ವರ್ಗದ ಮುಖ್ಯಸ್ಥನಾಗಿದ್ದನು 1 ಪೂರ್ವ 24:7-18 ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.

6ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.

7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.

8ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,

9ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.

10ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು.

11ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು.

12ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು.

13ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’1:13 ಯೋಹಾನ ಅಂದರೆ, ದೇವರ ದಯೆಯುಳ್ಳವನು ಎಂದು ಹೆಸರನ್ನಿಡಬೇಕು.

14ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು,

15ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.

16ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು.

17ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.

18ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು.

19ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.

20ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.

21ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.

22ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.

23ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು.

24ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು.

25ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು.

26ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು,

27ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.

28ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.

29ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.

30ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.

31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’1:31 ಯೇಸು ಅಂದರೆ, ಪ್ರಭುವು ರಕ್ಷಿಸುವನು ಎಂದು ಹೆಸರಿಡಬೇಕು.

32ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.

33ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.

34ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.

35ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.

36ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು.

37ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.

38ಮರಿಯಳು, “ಇಗೋ ನಾನು ಕರ್ತದೇವರ ದಾಸಿ, ನಿನ್ನ ತಕ್ಕ ಮಾತಿನಂತೆ ನನಗಾಗಲಿ,” ಎಂದಳು. ಆಗ ದೇವದೂತನು ಆಕೆಯ ಬಳಿಯಿಂದ ಹೊರಟುಹೋದನು.

39ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು.

40ಅಲ್ಲಿ ಜಕರೀಯನ ಮನೆಯನ್ನು ಪ್ರವೇಶಿಸಿ, ಎಲಿಸಬೇತಳನ್ನು ವಂದಿಸಿದಳು.

41ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ

42ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು!

43ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ?

44ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು.

45ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.

46ಆಗ ಮರಿಯಳು ಹೀಗೆ ಹೇಳಿದ್ದು:

47ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.

48ದೇವರು ತಮ್ಮ ದಾಸಿಯ

49ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ,

50ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ,

51ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ;

52ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ,

53ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ,

54ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಜೊತೆಯಲ್ಲಿದ್ದು, ಅನಂತರ ತನ್ನ ಮನೆಗೆ ಹಿಂತಿರುಗಿ ಹೋದಳು.

55ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು.

56ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.

57ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು.

58ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು.

59ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು.

60ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು.

61ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.

62ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು.

63ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.

64ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು.

65ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:

66“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ,

67ಇದನ್ನು, ನಾವು ನಮ್ಮ ಶತ್ರುಗಳಿಂದಲೂ

68ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ

69ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ

70“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ.

71ನೀನು ಜನರ ಪಾಪಕ್ಷಮಾಪಣೆಯ ಮೂಲಕ

72ನಮ್ಮ ದೇವರ ಮಮತೆಯ ಕರುಣೆಯಿಂದಲೇ,

73ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ

74ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

ಲೂಕ ಲೂಕ 2 →

ಲೂಕ 1 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019