We Believe JesusFé, Esperança e Nova Vida

ಇಬ್ರಿಯರಿಗೆ 3

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಇಬ್ರಿಯರಿಗೆ 2 ಇಬ್ರಿಯರಿಗೆ ಇಬ್ರಿಯರಿಗೆ 4 →

1ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.

2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ.

3ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ, ಮೋಶೆಗಿಂತ ಯೇಸು ಹೆಚ್ಚಾದ ಮಹಿಮೆಗೆ ಯೋಗ್ಯರೆಂದು ಎಣಿಸಿಕೊಂಡಿದ್ದಾರೆ.

4ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ.

5“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.”3:5 ಅರಣ್ಯ 12:7 ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.

6ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

7ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ,

8ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ

9ನಿಮ್ಮ ಪಿತೃಗಳು ನನ್ನನ್ನು ಕೆಣಕಿ ಪರೀಕ್ಷಿಸಿದರು,

10ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು,

11ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’

12ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.

13ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.

14ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!

15ಈಗಲೇ ಹೇಳಿದಂತೆ:

16“ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?

17ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!

18ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?

19ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.

← ಇಬ್ರಿಯರಿಗೆ 2 ಇಬ್ರಿಯರಿಗೆ ಇಬ್ರಿಯರಿಗೆ 4 →

ಇಬ್ರಿಯರಿಗೆ 3 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019