We Believe JesusFé, Esperança e Nova Vida

ಇಬ್ರಿಯರಿಗೆ 8

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಇಬ್ರಿಯರಿಗೆ 7 ಇಬ್ರಿಯರಿಗೆ ಇಬ್ರಿಯರಿಗೆ 9 →

1ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.

2ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ.

3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.

4ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.

5ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,”8:5 ವಿಮೋ 25:40 ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?

6ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.

7ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.

8ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು,

9ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು,

10ಆ ದಿನಗಳ ತರುವಾಯ

11ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ,

12ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು

13ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.

← ಇಬ್ರಿಯರಿಗೆ 7 ಇಬ್ರಿಯರಿಗೆ ಇಬ್ರಿಯರಿಗೆ 9 →

ಇಬ್ರಿಯರಿಗೆ 8 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019