We Believe JesusFé, Esperança e Nova Vida

ಅರಣ್ಯಕಾಂಡ 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

ಅರಣ್ಯಕಾಂಡ ಅರಣ್ಯಕಾಂಡ 2 →

1ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:

2“ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.

3ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು.

4ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.

5“ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು:

6ಸಿಮೆಯೋನ್ ಗೋತ್ರದಿಂದ ಚುರೀಷದ್ದೈಯನ ಮಗ ಶೆಲುಮೀಯೇಲ್,

7ಯೆಹೂದ ಗೋತ್ರದಿಂದ ಅಮ್ಮೀನಾದಾಬನ ಮಗ ನಹಶೋನ್,

8ಇಸ್ಸಾಕರ್ ಗೋತ್ರದಿಂದ ಚೂವಾರನ ಮಗ ನೆತನೆಯೇಲ್,

9ಜೆಬುಲೂನ್ ಗೋತ್ರದಿಂದ ಹೇಲೋನನ ಮಗ ಎಲೀಯಾಬ್,

10ಯೋಸೇಫನ ಗೋತ್ರದಲ್ಲಿ,

11ಬೆನ್ಯಾಮೀನ್ ಗೋತ್ರದಿಂದ ಗಿದ್ಯೋನಿನ ಮಗನಾದ ಅಬೀದಾನ,

12ದಾನ್ ಗೋತ್ರದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್,

13ಆಶೇರ್ ಗೋತ್ರದಿಂದ ಒಕ್ರಾನನ ಮಗ ಪಗೀಯೇಲ್,

14ಗಾದ್ ಗೋತ್ರದಿಂದ ದೆವುಯೇಲನ ಮಗ ಎಲ್ಯಾಸಾಫ್,

15ನಫ್ತಾಲಿ ಗೋತ್ರದಿಂದ ಏನಾನನ ಮಗ ಅಹೀರನು.”

16ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.

17ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು.

18ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.

19ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.

20ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಸಂತತಿಯವರಲ್ಲಿ:

21ರೂಬೇನನ ಗೋತ್ರದಲ್ಲಿ ಎಣಿಕೆಯಾದವರು 46,500 ಜನರು.

22ಸಿಮೆಯೋನನ ಸಂತತಿಯವರಲ್ಲಿ:

23ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದವರು 59,300 ಜನರು.

24ಗಾದನ ಸಂತತಿಯವರಲ್ಲಿ:

25ಗಾದನ ಗೋತ್ರದಲ್ಲಿ ಎಣಿಕೆಯಾದವರು 45,650 ಜನರು.

26ಯೆಹೂದ ಸಂತತಿಯವರಲ್ಲಿ:

27ಯೆಹೂದ ಗೋತ್ರದಲ್ಲಿ ಎಣಿಕೆಯಾದವರು 74,600 ಜನರು.

28ಇಸ್ಸಾಕಾರನ ಸಂತತಿಯವರಲ್ಲಿ:

29ಇಸ್ಸಾಕಾರನ ಗೋತ್ರದಲ್ಲಿ ಎಣಿಕೆಯಾದವರು 54,400 ಜನರು.

30ಜೆಬುಲೂನನ ಸಂತತಿಯವರಲ್ಲಿ:

31ಜೆಬುಲೂನ್ ಗೋತ್ರದಲ್ಲಿ ಎಣಿಕೆಯಾದವರು 57,400 ಜನರು.

32ಯೋಸೇಫನ ಮಕ್ಕಳಾದ

33ಎಫ್ರಾಯೀಮನ ಗೋತ್ರದಲ್ಲಿ ಎಣಿಕೆಯಾದವರು 40,500 ಜನರು.

34ಮನಸ್ಸೆಯ ಸಂತತಿಯವರಲ್ಲಿ:

35ಮನಸ್ಸೆಯ ಗೋತ್ರದಲ್ಲಿ ಎಣಿಕೆಯಾದವರು 32,200 ಜನರು.

36ಬೆನ್ಯಾಮೀನ್ ಸಂತತಿಯವರಲ್ಲಿ:

37ಬೆನ್ಯಾಮೀನನ ಗೋತ್ರದಲ್ಲಿ ಎಣಿಕೆಯಾದವರು 35,400 ಜನರು.

38ದಾನನ ಸಂತತಿಯವರಲ್ಲಿ:

39ದಾನನ ಗೋತ್ರದಲ್ಲಿ ಎಣಿಕೆಯಾದವರು 62,700 ಜನರು.

40ಆಶೇರನ ಸಂತತಿಯವರಲ್ಲಿ:

41ಆಶೇರನ ಗೋತ್ರದಲ್ಲಿ ಎಣಿಕೆಯಾದವರು 41,500 ಜನರು.

42ನಫ್ತಾಲಿಯ ಸಂತತಿಯವರಲ್ಲಿ:

43ನಫ್ತಾಲಿಯ ಗೋತ್ರದಲ್ಲಿ ಎಣಿಕೆಯಾದವರು 53,400 ಜನರು.

44ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು.

45ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು.

46ಎಣಿಕೆಯಾದವರು ಒಟ್ಟು 6,03,550 ಮಂದಿಯಾಗಿದ್ದರು.

47ಲೇವಿಯರ ತಂದೆಗಳ ಗೋತ್ರವನ್ನು ಇತರರೊಂದಿಗೆ ಎಣಿಸಲಿಲ್ಲ.

48ಇದಲ್ಲದೆ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ:

49“ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು.

50ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.

51ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.

52ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು.

53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”

54ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.

ಅರಣ್ಯಕಾಂಡ ಅರಣ್ಯಕಾಂಡ 2 →

ಅರಣ್ಯಕಾಂಡ 1 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019