We Believe JesusFé, Esperança e Nova Vida

ಅರಣ್ಯಕಾಂಡ 23

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಅರಣ್ಯಕಾಂಡ 22 ಅರಣ್ಯಕಾಂಡ ಅರಣ್ಯಕಾಂಡ 24 →

1ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.

2ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು.

3ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.

4ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು.

5ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.

6ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.

7ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ:

8ದೇವರು ಶಪಿಸದವನನ್ನು

9ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ.

10ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ,

11ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.

12ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.

13ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.

14ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.

15ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.

16ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.

17ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.

18ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ:

19ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ.

20ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ.

21“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ.

22ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ.

23ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ.

24ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು.

25ಆಗ ಬಾಲಾಕನು ಬಿಳಾಮನಿಗೆ, “ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು.

26ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.

27ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು.

28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.

29ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.

30ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.

← ಅರಣ್ಯಕಾಂಡ 22 ಅರಣ್ಯಕಾಂಡ ಅರಣ್ಯಕಾಂಡ 24 →

ಅರಣ್ಯಕಾಂಡ 23 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019