We Believe JesusFé, Esperança e Nova Vida

ಅರಣ್ಯಕಾಂಡ 7

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಅರಣ್ಯಕಾಂಡ 6 ಅರಣ್ಯಕಾಂಡ ಅರಣ್ಯಕಾಂಡ 8 →

1ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,

2ಇಸ್ರಾಯೇಲರ ಪ್ರಧಾನರು ಎಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.

3ಅವರು ಯೆಹೋವ ದೇವರ ಎದುರಿನಲ್ಲಿ ತಂದ ಅರ್ಪಣೆ ಏನೆಂದರೆ ಆರು ಕಮಾನುಬಂಡಿಗಳು, ಹನ್ನೆರಡು ಎತ್ತುಗಳು, ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯಂತೆ, ಒಬ್ಬೊಬ್ಬನಿಗೆ ಒಂದೊಂದು ಎತ್ತುಗಳನ್ನು ಅವರು ದೇವದರ್ಶನ ಗುಡಾರದ ಮುಂದೆ ತಂದರು.

4ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,

5“ಅವುಗಳನ್ನು ಅವರಿಂದ ತೆಗೆದುಕೋ, ಅವು ದೇವದರ್ಶನ ಗುಡಾರದ ಸೇವೆಮಾಡುವುದಕ್ಕೋಸ್ಕರ ಇರಬೇಕು. ಅವುಗಳನ್ನು ಲೇವಿಯರಿಗೆ ಅವನವನ ಕೆಲಸಕ್ಕೆ ತಕ್ಕಂತೆ ಕೊಡಬೇಕು,” ಎಂದರು.

6ಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು.

7ಎರಡು ಬಂಡಿಗಳನ್ನೂ, ನಾಲ್ಕು ಎತ್ತುಗಳನ್ನೂ, ಗೇರ್ಷೋನನ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕ ಪ್ರಕಾರ ಕೊಟ್ಟನು.

8ಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು.

9ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.

10ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.

11ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿಪೀಠದ ಪ್ರತಿಷ್ಠೆಗಾಗಿ ತಮ್ಮ ಕಾಣಿಕೆಯನ್ನು ಅರ್ಪಿಸಬೇಕು.”

12ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.

13ಅವನ ಅರ್ಪಣೆ ಏನೆಂದರೆ:

14ಧೂಪದಿಂದ ತುಂಬಿದ್ದ 10 ಶೆಕೆಲ್7:14 ಸುಮಾರು 115 ಗ್ರಾಂ ತೂಕದ ಬಂಗಾರದ ಒಂದು ಚಮಚ,

15ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,

16ದೋಷಪರಿಹಾರಕ ಬಲಿಗಾಗಿ ಒಂದು ಹೋತ,

17ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳೂ ಸಮಾಧಾನದ ಬಲಿಗಾಗಿ ಸಮರ್ಪಿಸಬೇಕು.

18ಎರಡನೆಯ ದಿವಸದಲ್ಲಿ ಇಸ್ಸಾಕಾರನ ಗೋತ್ರದ ಪ್ರಧಾನನಾಗಿರುವ ಚೂವಾರನ ಮಗ ನೆತನೆಯೇಲ್ ಅರ್ಪಿಸಿದನು.

19ಅವನ ಅರ್ಪಣೆ ಏನೆಂದರೆ:

20ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,

21ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

22ಪಾಪ ಪರಿಹಾರದ ಬಲಿಗಾಗಿ ಒಂದು ಹೋತ,

23ಸಮಾಧಾನದ ಬಲಿಗಳ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು.

24ಮೂರನೆಯ ದಿವಸದಲ್ಲಿ ಜೆಬುಲೂನ್ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗ ಎಲೀಯಾಬನು ಅರ್ಪಿಸಿದ್ದು.

25ಅವನ ಅರ್ಪಣೆ ಏನೆಂದರೆ:

26ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

27ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

28ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,

29ಮತ್ತು ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು.

30ನಾಲ್ಕನೆಯ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾನನಾಗಿರುವ ಶೆದೇಯೂರನ ಮಗ ಎಲೀಚೂರನು ಅರ್ಪಿಸಿದನು.

31ಅವನ ಅರ್ಪಣೆಯು ಏನೆಂದರೆ:

32ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,

33ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

34ಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ,

35ಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು.

36ಐದನೆಯ ದಿನದಲ್ಲಿ ಸಿಮೆಯೋನನ ಗೋತ್ರದ ಪ್ರಧಾನನಾಗಿರುವ ಚುರೀಷದ್ದೈಯನ ಮಗ ಶೆಲುಮೀಯೇಲನು ಅರ್ಪಿಸಿದನು.

37ಅವನ ಅರ್ಪಣೆಯು ಏನೆಂದರೆ:

38ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,

39ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

40ಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ,

41ಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು.

42ಆರನೆಯ ದಿನದಲ್ಲಿ ಗಾದನ ಗೋತ್ರದ ಪ್ರಧಾನನಾಗಿರುವ ದೆವುಯೇಲನ ಮಗ ಎಲ್ಯಾಸಾಫನು ಅರ್ಪಿಸಿದನು.

43ಅವನ ಅರ್ಪಣೆಯು ಏನೆಂದರೆ:

44ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,

45ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

46ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,

47ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು.

48ಏಳನೆಯ ದಿನದಲ್ಲಿ ಎಫ್ರಾಯೀಮ್ ಗೋತ್ರದ ಪ್ರಧಾನನಾದ ಅಮ್ಮೀಹೂದನ ಮಗ ಎಲೀಷಾಮನು ಅರ್ಪಿಸಿದನು.

49ಅವನ ಅರ್ಪಣೆ ಏನೆಂದರೆ:

50ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

51ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,

52ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,

53ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು.

54ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು.

55ಅವನ ಅರ್ಪಣೆಯು ಏನೆಂದರೆ:

56ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

57ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,

58ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,

59ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು.

60ಒಂಬತ್ತನೆಯ ದಿನದಲ್ಲಿ ಬೆನ್ಯಾಮೀನನ ಗೋತ್ರದ ಪ್ರಧಾನನಾದ ಗಿದ್ಯೋನಿಯ ಮಗ ಅಬೀದಾನನು ಅರ್ಪಿಸಿದನು.

61ಅವನ ಅರ್ಪಣೆಯು ಏನೆಂದರೆ:

62ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

63ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,

64ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,

65ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು.

66ಹತ್ತನೆಯ ದಿನದಲ್ಲಿ ದಾನನ ಗೋತ್ರದ ಪ್ರಧಾನವಾದ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಅರ್ಪಿಸಿದನು.

67ಅವನ ಅರ್ಪಣೆಯು ಏನೆಂದರೆ:

68ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

69ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

70ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,

71ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು.

72ಹನ್ನೊಂದನೆಯ ದಿನದಲ್ಲಿ ಆಶೇರನ ಗೋತ್ರದ ಪ್ರಧಾನನಾದ ಒಕ್ರಾನನ ಮಗ ಪಗೀಯೇಲನು ಅರ್ಪಿಸಿದನು.

73ಅವನ ಅರ್ಪಣೆಯು ಏನೆಂದರೆ:

74ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

75ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

76ದೋಷಪರಿಹಾರಕ ಬಲಿಗಾಗಿ ಒಂದು ಹೋತ,

77ಸಮಾಧಾನದ ಬಲಿಗಾಗಿ ಒಂದು ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು.

78ಹನ್ನೆರಡನೆಯ ದಿನದಲ್ಲಿ ನಫ್ತಾಲಿಯ ಗೋತ್ರದ ಪ್ರಧಾನನಾದ ಏನಾನನ ಮಗ ಅಹೀರನು ಅರ್ಪಿಸಿದನು.

79ಅವನ ಅರ್ಪಣೆಯು ಏನೆಂದರೆ:

80ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,

81ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,

82ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,

83ಸಮಾಧಾನದ ಸಮರ್ಪಣೆಯ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು.

84ಇದು ಬಲಿಪೀಠದ ಪ್ರತಿಷ್ಠೆಗಾಗಿ ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು:

85ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್7:85 ಸುಮಾರು 28 ಕಿಲೋಗ್ರಾಂ.

86ಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್7:86 ಸುಮಾರು 1.4 ಕಿಲೋಗ್ರಾಂ,

87ದಹನಬಲಿಗಾಗಿ ಇರುವ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ ಕುರಿಮರಿಗಳು 12, ಅವುಗಳೊಂದಿಗೆ ಧಾನ್ಯ ಸಮರ್ಪಣೆ. ದೋಷಪರಿಹಾರಕ ಬಲಿಗಾಗಿ 12 ಹೋತಗಳು,

88ಸಮಾಧಾನದ ಬಲಿಗಾಗಿರುವ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ ಗಂಡು ಕುರಿಮರಿಗಳು 60.

89ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.

← ಅರಣ್ಯಕಾಂಡ 6 ಅರಣ್ಯಕಾಂಡ ಅರಣ್ಯಕಾಂಡ 8 →

ಅರಣ್ಯಕಾಂಡ 7 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019