We Believe JesusFé, Esperança e Nova Vida

ಜೆಕರ್ಯ 13

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜೆಕರ್ಯ 12 ಜೆಕರ್ಯ ಜೆಕರ್ಯ 14 →

1“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.

2“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.

3ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.

4“ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.

5ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು.

6ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು.

7“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ,

8ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ

9ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ,

← ಜೆಕರ್ಯ 12 ಜೆಕರ್ಯ ಜೆಕರ್ಯ 14 →

ಜೆಕರ್ಯ 13 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019