1ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ;
2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ,
3ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ;
4ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ;
5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ,
6ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ;
7ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ;
8ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ;
9ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ;
10ಎಲ್ಲಿ ಗರ್ವವೋ ಅಲ್ಲಿ ಕಲಹ;
11ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು;
12ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ;
13ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು;
14ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ
15ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ;
16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ;
17ದುಷ್ಟ ದೂತನು ಕೇಡಿಗೆ ಬೀಳುತ್ತಾನೆ;
18ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು;
19ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ;
20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು;
21ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ;
22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು;
23ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ;
24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ;
25ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ;