1ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ
2ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ.
3ಜ್ಞಾನಪ್ರಿಯನು ತಂದೆಗೆ ಆನಂದ
4ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ,
5ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು,
6ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ,
7ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ.
8ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ.
9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ,
10ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ.
11ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು.
12ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ,
13ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು:
14ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ,
15ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ;
16ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ.
17ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು;
18ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ;
19ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ;
20ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ?
21ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ,
22ಕೋಪಿಷ್ಟನು ಜಗಳವನ್ನೆಬ್ಬಿಸುವನು,
23ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು;
24ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು.
25ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು;
26ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ.
27ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ.