1ಮಗನೇ, ನನ್ನ ಉಪದೇಶವನ್ನು ಮರೆಯಬೇಡ;
2ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು,
3ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ;
4ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ,
5ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
6ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
7ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ;
8ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು;
9ನಿನ್ನ ಆಸ್ತಿಯಿಂದಲೂ
10ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು;
11ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ;
12ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ,
13ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು,
14ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ;
15ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ;
16ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ;
17ಜ್ಞಾನದ ಮಾರ್ಗಗಳು ಸಂತೋಷಕರ;
18ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ;
19ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು,
20ದೇವರು ತಮ್ಮ ಅರಿವಿನಿಂದಲೇ ಸೆಲೆಗಳು ಒಡೆದು,
21ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ,
22ಅವು ನಿನಗೆ ಜೀವವಾಗಿರಲಿ.
23ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ;
24ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ;
25ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ;
26ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ,
27ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು
28ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ,
29ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ,
30ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ,
31ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ;
32ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ;
33ದುಷ್ಟರ ಮನೆಯ ಮೇಲೆ ದೈವಶಾಪವಿದೆ.
34ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ;
35ಜ್ಞಾನಿಗಳು ಸನ್ಮಾನಕ್ಕೆ ಬಾಧ್ಯನಾಗುವರು;