1ದೇವರೇ, ನನ್ನ ಹೃದಯವು ಸ್ಥಿರವಾಗಿದೆ;
2ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ,
3ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು.
4ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು.
5ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ.
6ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ
7ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ:
8ಗಿಲ್ಯಾದ್ ನನ್ನದು; ಮನಸ್ಸೆ ನನ್ನದು,
9ಮೋವಾಬ್ ನನ್ನ ಸ್ನಾನ ಪಾತ್ರೆಯು,
10ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು?
11ದೇವರೇ, ಈಗ ನೀವು
12ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ.
13ದೇವರಿಂದ ನಾವು ಜಯ ಹೊಂದುವೆವು.