We Believe JesusFé, Esperança e Nova Vida

ಕೀರ್ತನೆಗಳು 119

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 118 ಕೀರ್ತನೆಗಳು ಕೀರ್ತನೆಗಳು 120 →

1ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು,

2ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ

3ಅಂಥವರು ಅನ್ಯಾಯವನ್ನು ಮಾಡದೆ,

4ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು

5ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ

6ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ

7ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ,

8ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು;

9ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು?

10ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ;

11ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ

12ಯೆಹೋವ ದೇವರೇ, ನಿಮಗೆ ಸ್ತುತಿಯುಂಟಾಗಲಿ;

13ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ

14ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ

15ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ,

16ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು,

17ನಾನು ಜೀವದಿಂದಿದ್ದು ನಿಮ್ಮ ವಾಕ್ಯವನ್ನು ಕೈಗೊಳ್ಳುವಂತೆ

18ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ

19ಈ ಭೂಮಿಯಲ್ಲಿ ನಾನೊಬ್ಬ ಪ್ರವಾಸಿಯಾಗಿದ್ದೇನೆ;

20ನಿಮ್ಮ ನಿಯಮಗಳನ್ನು ಯಾವಾಗಲೂ ಹಂಬಲಿಸುತ್ತಿರುವುದರಿಂದ,

21ನಿಮ್ಮ ಆಜ್ಞೆಗಳನ್ನು ಅನುಸರಿಸದೆ ತಪ್ಪಿಹೋಗುವ ಶಾಪಗ್ರಸ್ತರಾದ

22ನಾನು ನಿಮ್ಮ ಶಾಸನಗಳನ್ನು ಕೈಗೊಂಡ ಕಾರಣ,

23ಅಧಿಕಾರಿಗಳು ನನಗೆ ವಿರೋಧವಾಗಿ ಕುಳಿತುಕೊಂಡು ಮಾತನಾಡಿಕೊಂಡರೂ,

24ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ;

25ನಾನು ಧೂಳಿನಲ್ಲಿ ಬಿದ್ದಿದ್ದೇನೆ;

26ನಾನು ನನ್ನ ಮಾರ್ಗಗಳನ್ನು ಲೆಕ್ಕ ಒಪ್ಪಿಸಲು,

27ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ,

28ನನ್ನ ಪ್ರಾಣವು ದುಃಖದಿಂದ ಬಲಹೀನವಾಗಿದೆ;

29ವಂಚನೆಯುಳ್ಳ ಮಾರ್ಗದಿಂದ ನನ್ನನ್ನು ಕಾಪಾಡಿರಿ;

30ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ;

31ಯೆಹೋವ ದೇವರೇ, ನಾನು ನಿಮ್ಮ ಶಾಸನಗಳನ್ನು ಬಿಗಿಯಾಗಿಟ್ಟುಕೊಂಡಿದ್ದೇನೆ;

32ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು,

33ಯೆಹೋವ ದೇವರೇ, ನಿಮ್ಮ ತೀರ್ಪುಗಳ ವಿವರವನ್ನು ನನಗೆ ಬೋಧಿಸಿರಿ;

34ನಿಮ್ಮ ನಿಯಮವನ್ನು ಹಿಂಬಾಲಿಸಿ,

35ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸಿರಿ,

36ಸ್ವಾರ್ಥದ ಲಾಭಗಳ ಕಡೆಗಲ್ಲ,

37ವ್ಯರ್ಥವಾದವುಗಳಿಂದ ನನ್ನ ಕಣ್ಣುಗಳನ್ನು ತಿರುಗಿಸಿ,

38ನಿಮಗೆ ಭಯಪಡುವವರಿಗಾಗಿ ನೀಡುವ ವಾಗ್ದಾನವನ್ನು

39ನಾನು ಭಯಪಡುವ ನನ್ನ ನಿಂದೆಯನ್ನು ನನ್ನಿಂದ ತೊಲಗಿಸಿರಿ,

40ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ!

41ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ದೊರಕಲಿ,

42ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು,

43ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡಿರಿ,

44ನಾನು ನಿಮ್ಮ ನಿಯಮವನ್ನು ಯಾವಾಗಲೂ

45ನಿಮ್ಮ ಸೂತ್ರಗಳನ್ನು ನಾನು ಹುಡುಕುವುದರಿಂದ,

46ಅರಸರ ಮುಂದೆ ನಿಮ್ಮ ಶಾಸನಗಳನ್ನು ಮಾತಾಡುವೆನು,

47ನಿಮ್ಮ ಆಜ್ಞೆಗಳನ್ನು ನಾನು ಪ್ರೀತಿಸುವುದರಿಂದ,

48ನಾನು ಪ್ರೀತಿಸುವ ನಿಮ್ಮ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ,

49ನಿಮ್ಮ ಸೇವಕನಿಗೋಸ್ಕರ ನಿಮ್ಮ ವಾಕ್ಯವನ್ನು ನೀವು ಜ್ಞಾಪಕಮಾಡಿಕೊಳ್ಳಿರಿ,

50ನಿಮ್ಮ ವಾಗ್ದಾನವು ನನ್ನ ಜೀವದ ಸಂರಕ್ಷಣೆಯಾಗಿದೆ.

51ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ,

52ಯೆಹೋವ ದೇವರೇ, ನಿಮ್ಮ ಪುರಾತನ ನಿಯಮಗಳನ್ನು ನಾನು ನೆನಪು ಮಾಡಿಕೊಂಡು,

53ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ,

54ನನ್ನ ಪ್ರವಾಸದ ಮನೆಯಲ್ಲಿ

55ಯೆಹೋವ ದೇವರೇ, ರಾತ್ರಿಯಲ್ಲಿ ನಿಮ್ಮ ನಾಮಸ್ಮರಣೆ ಮಾಡುವುದರಿಂದ,

56ನಾನು ನಿಮ್ಮ ಸೂತ್ರಗಳನ್ನು ಕೈಗೊಂಡಿದ್ದೇನೆ:

57ಯೆಹೋವ ದೇವರೇ, ನೀವೇ ನನ್ನ ಪಾಲು;

58ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ;

59ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ

60ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು

61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡಿದ್ದರೂ,

62ನಿಮ್ಮ ನೀತಿಯುಳ್ಳ ನಿಯಮಗಳಿಗಾಗಿ

63ನಿಮಗೆ ಭಯಪಡುವವರೆಲ್ಲರಿಗೂ,

64ಯೆಹೋವ ದೇವರೇ, ಭೂಮಿಯು ನಿಮ್ಮ ಪ್ರೀತಿಯಿಂದ ತುಂಬಿದೆ;

65ಯೆಹೋವ ದೇವರೇ, ನಿಮ್ಮ ವಾಕ್ಯದ ಪ್ರಕಾರ

66ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ,

67ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು,

68ನೀವು ಒಳ್ಳೆಯವರೂ, ಒಳ್ಳೆಯದನ್ನು ಮಾಡುವವರೂ ಆಗಿದ್ದೀರಿ;

69ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು,

70ಅವರ ಹೃದಯವು ಕಠಿಣವೂ ಮಂದವೂ ಆಗಿದೆ,

71ನಾನು ಶ್ರಮೆಪಟ್ಟದ್ದು ನನಗೆ ಒಳ್ಳೆಯದಾಯಿತು

72ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ

73ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು;

74ನಿಮಗೆ ಭಯಪಡುವವರು ನನ್ನನ್ನು ನೋಡಿ ಆನಂದಿಸಲಿ,

75ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು;

76ನೀವು ನಿಮ್ಮ ಸೇವಕನಿಗೆ ನೀಡಿದ ವಾಗ್ದಾನದ ಪ್ರಕಾರ,

77ನಾನು ಜೀವಿಸುವಂತೆ ನಿಮ್ಮ ಅನುಕಂಪವು ನನಗೆ ಬರಲಿ,

78ಅಹಂಕಾರಿಗಳು ಕಾರಣವಿಲ್ಲದೆ ನನಗೆ ಕೇಡು ಮಾಡಿದ್ದರಿಂದ ನಾಚಿಕೆಪಡಲಿ;

79ನಿಮಗೆ ಭಯಪಡುವವರು ನನ್ನ ಬಳಿಗೆ ಬರಲಿ,

80ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು,

81ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ,

82ನನ್ನ ಕಣ್ಣುಗಳು ನಿಮ್ಮ ವಾಗ್ದಾನಕ್ಕಾಗಿ ಕಾಯುತ್ತಾ ಮಂದವಾಗುತ್ತಿವೆ;

83ನಾನು ಹೊಗೆಯಲ್ಲಿರುವ ದ್ರಾಕ್ಷಾರಸದ ಚರ್ಮಚೀಲದಂತ್ತಿದ್ದರೂ,

84ಎಷ್ಟು ಕಾಲ ನಿಮ್ಮ ಸೇವಕನು ಕಾಯಬೇಕು?

85ನಿಮ್ಮ ನಿಯಮಕ್ಕೆ ವಿರೋಧವಾಗಿ

86ನಿಮ್ಮ ಆಜ್ಞೆಗಳೆಲ್ಲಾ ಭರವಸೆಗೆ ಯೋಗ್ಯವಾದವುಗಳೇ;

87ಅವರು ನನ್ನನ್ನು ಬಹುಮಟ್ಟಿಗೆ ಭೂಮಿಯಿಂದ ಅಳಿಸಿಹಾಕಲು ನೋಡಿದರು,

88ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನ ಜೀವನವನ್ನು ಪರಿಪಾಲಿಸಿರಿ,

89ಯೆಹೋವ ದೇವರೇ, ನಿಮ್ಮ ವಾಕ್ಯವು ಶಾಶ್ವತವಾಗಿದೆ;

90ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು;

91ನಿಮ್ಮ ನಿಯಮಗಳು ಇಂದಿನವರೆಗೂ ನಿಂತಿರುತ್ತವೆ,

92ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ,

93ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ,

94ನನ್ನನ್ನು ರಕ್ಷಿಸಿರಿ, ಏಕೆಂದರೆ ನಾನು ನಿಮ್ಮವನೇ;

95ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ,

96ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ;

97ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ!

98ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು

99ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ.

100ನಿಮ್ಮ ಸೂತ್ರಗಳನ್ನು ಕೈಗೊಂಡಿರುವುದರಿಂದ

101ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು,

102ನಿಮ್ಮ ನಿಯಮಗಳಿಂದ ನಾನು ತಪ್ಪಿಹೋಗಲಿಲ್ಲ,

103ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ!

104ನಾನು ನಿಮ್ಮ ಸೂತ್ರಗಳಿಂದ ತಿಳುವಳಿಕೆಯನ್ನು ಸಂಪಾದಿಸಿಕೊಂಡಿದ್ದೇನೆ;

105ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ

106ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ;

107ನಾನು ಬಹಳ ಕಷ್ಟ ಅನುಭವಿಸಿದ್ದೇನೆ;

108ಯೆಹೋವ ದೇವರೇ, ನನ್ನ ಬಾಯಿಂದ ಸಿದ್ಧಮನಸ್ಸಿನ ಸ್ತೋತ್ರಗಳನ್ನು ಸ್ವೀಕರಿಸಿರಿ,

109ನನ್ನ ಜೀವನ ಆಗಾಗ ಅಪಾಯದಲ್ಲಿದೆ,

110ದುಷ್ಟರು ನನಗೆ ಬಲೆಯೊಡ್ಡಿದ್ದಾರೆ;

111ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ;

112ನಿಮ್ಮ ತೀರ್ಪುಗಳನ್ನು ಕಡೆವರೆಗೂ ಪಾಲಿಸುವುದಕ್ಕೆ

113ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ,

114ನೀವೇ ನನ್ನ ಆಶ್ರಯವೂ, ಗುರಾಣಿಯೂ ಆಗಿದ್ದೀರಿ;

115ನಿಯಮ ಮೀರುವವರೇ, ನನ್ನಿಂದ ತೊಲಗಿರಿ,

116ನನ್ನ ದೇವರೇ, ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ನೆಲೆಗೊಳಿಸಿರಿ, ಆಗ ನಾನು ಬದುಕುವೆನು;

117ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು;

118ನಿಮ್ಮ ತೀರ್ಪುಗಳನ್ನು ಮೀರಿದವರನ್ನೆಲ್ಲಾ ನೀವು ತಿರಸ್ಕರಿಸುತ್ತೀರಿ,

119ಭೂಮಿಯಲ್ಲಿರುವ ದುಷ್ಟರೆಲ್ಲರನ್ನು ಕಸದ ಹಾಗೆ ತೆಗೆದು ಹಾಕುತ್ತೀರಿ;

120ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ;

121ನಾನು ನೀತಿನ್ಯಾಯವನ್ನು ನಡೆಸಿದ್ದೇನೆ;

122ನಿಮ್ಮ ಸೇವಕನ ಕ್ಷೇಮವನ್ನು ದೃಢಪಡಿಸಿರಿ;

123ನಿಮ್ಮ ರಕ್ಷಣೆಯನ್ನೂ ನಿಮ್ಮ ನೀತಿಯ ವಾಗ್ದಾನವನ್ನೂ ಕಾಯುತ್ತಾ,

124ನಿಮ್ಮ ಪ್ರೀತಿಗೆ ಅನುಸಾರವಾಗಿ ನಿಮ್ಮ ಸೇವಕನೊಂದಿಗೆ ವ್ಯವಹರಿಸಿ,

125ನಾನು ನಿಮ್ಮ ಸೇವಕನು, ನಿಮ್ಮ ಶಾಸನಗಳನ್ನು ನಾನು ಅರ್ಥಮಾಡಿಕೊಳ್ಳುವಂತೆ

126ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ,

127ಆದ್ದರಿಂದ ನಾನು ನಿಮ್ಮ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೌದು,

128ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ,

129ನಿಮ್ಮ ಶಾಸನಗಳು ಅದ್ಭುತವಾದವುಗಳೇ;

130ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು;

131ನಿಮ್ಮ ಆಜ್ಞೆಗಳಿಗಾಗಿರುವ ಬಯಕೆಯು,

132ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ,

133ನನ್ನ ಹೆಜ್ಜೆಗಳನ್ನು ನಿಮ್ಮ ವಾಕ್ಯದ ಪ್ರಕಾರ ಮುನ್ನಡೆಸಿರಿ;

134ಜನರ ಬಲಾತ್ಕಾರದಿಂದ ನನ್ನನ್ನು ತಪ್ಪಿಸಿರಿ,

135ನಿಮ್ಮ ಮುಖವನ್ನು ನಿಮ್ಮ ಸೇವಕನ ಮೇಲೆ ಪ್ರಕಾಶಿಸಿರಿ

136ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ

137ಯೆಹೋವ ದೇವರೇ, ನೀವು ನೀತಿವಂತರು,

138ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು;

139ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ,

140ನಿಮ್ಮ ವಾಗ್ದಾನಗಳು ಬಹು ಪರಿಶೋಧಿತವಾಗಿವೆ,

141ನಾನು ಅಲ್ಪನೂ, ತಿರಸ್ಕಾರ ಹೊಂದಿದವನು ಆಗಿದ್ದರೂ,

142ನಿಮ್ಮ ನೀತಿಯು ನಿತ್ಯವಾದದ್ದು

143ಕಷ್ಟಸಂಕಟಗಳು ನನ್ನನ್ನು ಹಿಡಿದಿವೆ,

144ನಿಮ್ಮ ಶಾಸನಗಳು ಯಾವಾಗಲೂ ನೀತಿಯುಕ್ತವಾಗಿವೆ;

145ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ;

146ನಿಮಗೇ ಮೊರೆಯಿಟ್ಟಿದ್ದೇನೆ; ನನ್ನನ್ನು ರಕ್ಷಿಸಿರಿ

147ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ;

148ನಾನು ನಿಮ್ಮ ವಾಕ್ಯವನ್ನು ಧ್ಯಾನ ಮಾಡುವಂತೆ,

149ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಮೊರೆಯನ್ನು ಕೇಳಿರಿ;

150ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ;

151ಯೆಹೋವ ದೇವರೇ, ನೀವು ಸಮೀಪವಾಗಿದ್ದೀರಿ,

152ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು

153ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ;

154ನನ್ನ ಪರವಾಗಿ ವಾದಿಸಿ, ನನ್ನನ್ನು ವಿಮೋಚಿಸಿರಿ;

155ದುಷ್ಟರಿಗೆ ರಕ್ಷಣೆಯು ದೂರವಾಗಿದೆ;

156ಯೆಹೋವ ದೇವರೇ, ನಿಮ್ಮ ಅನುಕಂಪವು ಮಹತ್ತಾದವುಗಳು;

157ನನ್ನನ್ನು ಹಿಂಸಿಸುವ ನನ್ನ ವೈರಿಗಳು ಅನೇಕರಾಗಿದ್ದಾರೆ,

158ನಾನು ಅಪನಂಬಿಗಸ್ತರನ್ನು ಕಂಡು ಅಸಹ್ಯಪಡುತ್ತೇನೆ,

159ನಿಮ್ಮ ಸೂತ್ರಗಳನ್ನು ನಾನು ಎಷ್ಟು ಪ್ರೀತಿಸುತ್ತೇನೆ ನೋಡಿರಿ;

160ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ;

161ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ,

162ದೊಡ್ಡ ಕೊಳ್ಳೆಯನ್ನು ಕಂಡುಹಿಡಿದವರಂತೆ

163ಸುಳ್ಳುತನವನ್ನು ನಾನು ದ್ವೇಷಿಸಿ ಅಸಹ್ಯಪಡುತ್ತೇನೆ

164ನಿಮ್ಮ ನೀತಿಯ ನಿಯಮಗಳ ನಿಮಿತ್ತ,

165ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ,

166ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಕಾದುಕೊಂಡಿದ್ದೇನೆ;

167ನಾನು ನಿಮ್ಮ ಶಾಸನಗಳನ್ನು ಅನುಸರಿಸುವದರಿಂದ,

168ನಾನು ನಿಮ್ಮ ಸೂತ್ರಗಳನ್ನೂ ಶಾಸನಗಳನ್ನೂ ಪಾಲಿಸುತ್ತೇನೆ,

169ಯೆಹೋವ ದೇವರೇ, ನನ್ನ ಮೊರೆ ನಿಮ್ಮ ಸನ್ನಿಧಿ ಸೇರಲಿ;

170ನನ್ನ ಬೇಡಿಕೆಯು ನಿಮ್ಮ ಸನ್ನಿಧಿ ಸೇರಲಿ;

171ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ,

172ನಿಮ್ಮ ಆಜ್ಞೆಗಳೆಲ್ಲಾ ನೀತಿಯುಳ್ಳವುಗಳಾಗಿವೆ,

173ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ,

174ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ,

175ನಿಮ್ಮನ್ನು ಸ್ತುತಿಸಲು ನಾನು ಬದುಕಿರಲಿ;

176ತಪ್ಪಿಹೋದ ಕುರಿಯಂತೆ ನಾನು ದಾರಿತಪ್ಪಿದ್ದೇನೆ.

← ಕೀರ್ತನೆಗಳು 118 ಕೀರ್ತನೆಗಳು ಕೀರ್ತನೆಗಳು 120 →

ಕೀರ್ತನೆಗಳು 119 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019