1ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ?
2ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು?
3ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ.
4“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ,
5ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ.
6ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು,