1ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು;
2ಪ್ರತಿದಿನ ನಿಮ್ಮನ್ನು ಸ್ತುತಿಸುವೆನು;
3ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ.
4ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ;
5ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ
6ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು;
7ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು;
8ಯೆಹೋವ ದೇವರು ಕೃಪಾಳುವೂ, ಅನುಕಂಪವೂ,
9ಯೆಹೋವ ದೇವರು ಸರ್ವರಿಗೂ ಒಳ್ಳೆಯವರು.
10ಯೆಹೋವ ದೇವರೇ, ನಿಮ್ಮ ನಂಬಿಗಸ್ತರು
11ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು;
12ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ,
13ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ;
14ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ.
15ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ.
16ನಿಮ್ಮ ಕೈದೆರೆದು
17ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ
18ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ,
19ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ.
20ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ.
21ನನ್ನ ಬಾಯಿ ಯೆಹೋವ ದೇವರ ಸ್ತೋತ್ರವನ್ನು ನುಡಿಯಲಿ;