1ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ
2ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ;
3ನನ್ನ ಅತಿಕ್ರಮಗಳನ್ನು ನಾನೇ ತಿಳಿದಿದ್ದೇನೆ,
4ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ,
5ಹುಟ್ಟಿದಂದಿನಿಂದಲೇ ನಾನು ಪಾಪಿ.
6ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ.
7ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು.
8ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ;
9ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ;
10ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
11ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ;
12ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ;
13ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು;
14ದೇವರೇ, ನನ್ನ ರಕ್ಷಣೆಯ ದೇವರೇ,
15ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ.
16ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು.
17ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ.
18ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ,
19ಆಗ ನೀತಿಯ ಯಜ್ಞಗಳಲ್ಲಿಯೂ