1ಯೆಹೋವ ದೇವರೇ, ನನಗೆ ಉತ್ತರಕೊಡಿರಿ.
2ನನ್ನ ಪ್ರಾಣವನ್ನು ಕಾಪಾಡಿರಿ, ನಾನು ನಿಮ್ಮ ಭಕ್ತ,
3ಯೆಹೋವ ದೇವರೇ, ನನ್ನನ್ನು ಕರುಣಿಸಿರಿ.
4ನಿಮ್ಮ ಸೇವಕನ ಪ್ರಾಣವನ್ನು ಸಂತೋಷಪಡಿಸಿರಿ.
5ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ.
6ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ.
7ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು.
8ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ.
9ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು
10ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ.
11ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ.
12ನನ್ನ ದೇವರಾದ ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು.
13ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ.
14ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ.
15ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು
16ನನ್ನ ಕಡೆಗೆ ತಿರುಗಿಕೊಂಡು ನನ್ನನ್ನು ಕರುಣಿಸಿರಿ.
17ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ.