1ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು;
2ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು;
3ನನ್ನ ಶತ್ರುಗಳು ಹಿಂದಿರುಗಿ ಓಡುವರು;
4ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು
5ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ;
6ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ,
7ಯೆಹೋವ ದೇವರು ಸದಾ ಆಳುವವರು;
8ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು;
9ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು,
10ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು,
11ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ;
12ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು;
13ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ.
14ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ
15ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ;
16ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ;
17ದುಷ್ಟರು ಪಾತಾಳಕ್ಕೆ ತಿರುಗುವರು,
18ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ;
19ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ;
20ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ;