1ಯೆಹೋವ ದೇವರೇ, ತಲತಲಾಂತರಗಳಲ್ಲಿ
2ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ
3ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ.
4ಸಾವಿರ ವರ್ಷಗಳು ನಿಮ್ಮ ದೃಷ್ಟಿಗೆ
5ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ.
6ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ.
7ನಾವು ನಿಮ್ಮ ಬೇಸರದಿಂದ ಬಾಧಿತರಾಗಿದ್ದೇವೆ.
8ನಮ್ಮ ಅಕ್ರಮಗಳನ್ನು ನಿಮ್ಮ ಮುಂದೆ ಇಟ್ಟಿದ್ದೀರಿ.
9ನಮ್ಮ ದಿವಸಗಳೆಲ್ಲಾ ನಿಮ್ಮ ಖಂಡನೆಯಿಂದಲೇ ದಾಟಿಹೋದವು.
10ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ,
11ನಿಮ್ಮ ಕೋಪದ ಶಕ್ತಿಯನ್ನು ತಿಳಿದವರ‍್ಯಾರು?
12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ,
13ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ?
14ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಮ್ಮನ್ನು ತೃಪ್ತಿಪಡಿಸಿರಿ.
15ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ.
16ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ.
17ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ.